lirikcinta.com
a b c d e f g h i j k l m n o p q r s t u v w x y z 0 1 2 3 4 5 6 7 8 9 #

ello hutti - c. aswath lyrics

Loading...

ಎಲ್ಲೋ ಹುಟ್ಟಿ ಎಲ್ಲೋ ಬೆಳೆದು
ಒಳಗೊಳಗೇ ಹರಿಯುವವಳು
ಜೀವ ಹಿಂಡಿ ಹಿಪ್ಪೆ ಮಾಡಿ

ಒಳಗೊಳಗೇ ಕೊರೆಯುವವಳು,

ಎಲ್ಲೋ ಹುಟ್ಟಿ ಎಲ್ಲೋ ಬೆಳೆದು
ಒಳಗೊಳಗೇ ಹರಿಯುವವಳು
ಜೀವ ಹಿಂಡಿ ಹಿಪ್ಪೆ ಮಾಡಿ
ಒಳಗೊಳಗೇ ಕೊರೆಯುವವಳು,

ಸದಾ….ಗುಪ್ತಗಾಮಿನಿ ನನ್ನ ಶಾಲ್ಮಲಾ.
ಸದಾ….ಗುಪ್ತಗಾಮಿನಿ ನನ್ನ ಶಾಲ್ಮಲಾ…

ಹಸಿರು ಮುರಿವ ಎಲೆಗಳಲ್ಲಿ
ಬಸಿರ ಬಯಕೆ ಒಸರುವವಳು
ತುಟಿ ಬಿರಿಯುವ ಹೂಗಳಲ್ಲಿ
ಬೆಂಕಿ ಹಾಡು ಉಸುರುವವಳು,

ಹಸಿರು ಮುರಿವ ಎಲೆಗಳಲ್ಲಿ
ಬಸಿರ ಬಯಕೆ ಒಸರುವವಳು
ತುಟಿ ಬಿರಿಯುವ ಹೂಗಳಲ್ಲಿ
ಬೆಂಕಿ ಹಾಡು ಉಸುರುವವಳು,
ಸದಾ….ತಪ್ತಕಾಮಿನಿ ನನ್ನ ಶಾಲ್ಮಲಾ.

ಭೂಗರ್ಭದ ಮೌನದಲ್ಲಿ
ಧುಮ್ಮೆನುತ ಬಳುಕುವವಳು
ಅರಿವಿಲ್ಲದೆ ಮೈಯ ತುಂಬಿ
ಕನಸಿನಲ್ಲಿ ತುಳುಕುವವಳು,

ಭೂಗರ್ಭದ ಮೌನದಲ್ಲಿ
ಧುಮ್ಮೆನುತ ಬಳುಕುವವಳು
ಅರಿವಿಲ್ಲದೆ ಮೈಯ ತುಂಬಿ
ಕನಸಿನಲ್ಲಿ ತುಳುಕುವವಳು,
ಸದಾ….ಸುಪ್ತಮೋಹಿನಿ
ನನ್ನ ಶಾಲ್ಮಲಾ.
ಸದಾ….ಸುಪ್ತಮೋಹಿನಿ
ನನ್ನ ಶಾಲ್ಮಲಾ.

ನನ್ನ ಬದುಕ ಭುವನೇಶ್ವರಿ
ನನ್ನ ಶಾಲ್ಮಲಾ,
ನನ್ನ ಹೃದಯ ರಾಜೇಶ್ವರಿ
ನನ್ನ ಶಾಲ್ಮಲಾ,
ನನ್ನ ಬದುಕ ಭುವನೇಶ್ವರಿ
ನನ್ನ ಶಾಲ್ಮಲಾ,
ನನ್ನ ಹೃದಯ ರಾಜೇಶ್ವರಿ
ನನ್ನ ಶಾಲ್ಮಲಾ,
ಸದಾ….ಗುಪ್ತಗಾಮಿನಿ
ನನ್ನ ಶಾಲ್ಮಲಾ.
ಸದಾ….ಗುಪ್ತಗಾಮಿನಿ
ನನ್ನ ಶಾಲ್ಮಲಾ.

Random Song Lyrics :

Popular

Loading...