lirikcinta.com
a b c d e f g h i j k l m n o p q r s t u v w x y z 0 1 2 3 4 5 6 7 8 9 #

thamburi - c. aswath lyrics

Loading...

ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೇ ಬಾರಿಸದಿರು ತಂಬೂರಿ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ

ಬರದೇ ಬಾರಿಸದಿರು ತಂಬೂರಿ
ಸರಸ ಸಂಗೀತದ ಕುರುಹುಗಳರಿಯದೆ
ಸರಸ ಸಂಗೀತದ ಕುರುಹುಗಳರಿಯದೆ
ಬರಿದೆ ಬಾರಿಸದಿರು ತಂಬೂರಿ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೇ ಬಾರಿಸದಿರು ತಂಬೂರಿ
ಮದ್ದಾಲಿ ದನಿಯೊಳು ತಂಬೂರಿ ಅದ
ತಿದ್ದಿ ನುಡಿಸಬೇಕೊ ತಂಬೂರಿ
ಮದ್ದಾಲಿ ದನಿಯೊಳು ತಂಬೂರಿ ಅದ
ತಿದ್ದಿ ನುಡಿಸಬೇಕೊ ತಂಬೂರಿ
ಸಿದ್ಧ ಸಾಧಕರ ವಿದ್ಯೆಗೆ ಒದಗುವ.
ಸಿದ್ಧ ಸಾಧಕರ ವಿದ್ಯೆಗೆ ಒದಗುವ
ಬುದ್ಧಿವಂತಕೆ ತಕ್ಕ ತಂಬೂರಿ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೇ ಬಾರಿಸದಿರು ತಂಬೂರಿ
ಬಾಳ ಬಲ್ಲವರಿಗೆ ತಂಬೂರಿ ದೇವ
ಬಾಳ ಚರಕಿಸಿದ ತಂಬೂರಿ
ಬಾಳ ಬಲ್ಲವರಿಗೆ ತಂಬೂರಿ ದೇವ
ಬಾಳ ಚರಕಿಸಿದ ತಂಬೂರಿ
ಹೇಳಲಿ ಏನಿದರ ಹಂಚಿಕೆ ತಿಳಿಯದ.
ಹೇಳಲಿ ಏನಿದರ ಹಂಚಿಕೆ ತಿಳಿಯದ
ತಾಳಗೇಡಿಗೆ ಸಲ್ಲ ತಂಬೂರಿ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೇ ಬಾರಿಸದಿರು ತಂಬೂರಿ
ಹಸನಾದ ಮೇಳಕ್ಕೆ ತಂಬೂರಿ ಇದು
ಕುಶಲರಿಗೊಪ್ಪುವ ತಂಬೂರಿ
ಹಸನಾದ ಮೇಳಕ್ಕೆ ತಂಬೂರಿ ಇದು
ಕುಶಲರಿಗೊಪ್ಪುವ ತಂಬೂರಿ
ಶಿಶುನಾಳಧೀಶನ ಓದು ಪುರಾಣದಿ
ಶಿಶುನಾಳಧೀಶನ ಓದು ಪುರಾಣದಿ
ಹಸನಾಗಿ ಬಾರಿಸು ತಂಬೂರಿ

ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೇ ಬಾರಿಸದಿರು ತಂಬೂರಿ
ಸರಸ ಸಂಗೀತದ ಕುರುಹುಗಳರಿಯದೆ
ಬರಿದೆ ಬಾರಿಸದಿರು ತಂಬೂರಿ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೇ ಬಾರಿಸದಿರು ತಂಬೂರ

Random Song Lyrics :

Popular

Loading...