lirikcinta.com
a b c d e f g h i j k l m n o p q r s t u v w x y z 0 1 2 3 4 5 6 7 8 9 #

badavanadarenu priye - raju ananthaswamy lyrics

Loading...

ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
ಎದೆಯ ತುಂಬ ಒತ್ತಿಕೊಂಡು ಮುತ್ತು ಮಳೆಯ ಸುರುಸುವೆ

ಎದೆಯ ತುಂಬ ಒತ್ತಿಕೊಂಡು ಮುತ್ತು ಮಳೆಯ ಸುರುಸುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
music…
ನನ್ನ ಎದೆಯ ರಾಜ್ಯದಲ್ಲಿ ನೀನು ರಾಣಿ ಯಾಗುವೆ
ನನ್ನ ಎದೆಯ ರಾಜ್ಯದಲ್ಲಿ ನೀನು ರಾಣಿ ಯಾಗುವೆ
ಪುಟ್ಟ ಗುಡಿಸಲಲ್ಲಿ ನಿನ್ನ ಪಟ್ಟದರಸಿ ಮಾಡುವೆ
ಪುಟ್ಟ ಗುಡಿಸಲಲ್ಲಿ ನಿನ್ನ ಪಟ್ಟದರಸಿ ಮಾಡುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
music…
ಉಳ್ಳವರ ಎದೆಗೆ ಒದ್ದು ಮೈ ಮಾನ ಮುಚ್ಚುವೆ
ಉಳ್ಳವರ ಎದೆಗೆ ಒದ್ದು ಮೈ ಮಾನ ಮುಚ್ಚುವೆ
ರಟ್ಟೆ ಮೇಲೆ ಹೊತ್ತು ನಿನ್ನ ಜಗವ ಸುತ್ತಿ ತಣಿಸುವೆ
ರಟ್ಟೆ ಮೇಲೆ ಹೊತ್ತು ನಿನ್ನ ಜಗವ ಸುತ್ತಿ ತಣಿಸುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
music…
ಬೆವರು ಹರಿಸಿ ಹೂವ ಬೆಳಸಿ ಮುಡಿಯಲ್ಲಿಟ್ಟು
ನಗಿಸುವೆ
ಬೆವರು ಹರಿಸಿ ಹೂವ ಬೆಳಸಿ ಮುಡಿಯಲ್ಲಿಟ್ಟು
ನಗಿಸುವೆ
ಭುಜಕೆ ಭುಜವ ಹಚ್ಚಿ ನಿಂತು ತೋಳುಬಂದಿ ತೋಡಿಸುವೆ
ಭುಜಕೆ ಭುಜವ ಹಚ್ಚಿ ನಿಂತು ತೋಳುಬಂದಿ ತೋಡಿಸುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
music…
ಹರಿವ ನದಿಗೆ ಅಡ್ಡ ನಿಂತು ನಿನಗೆ ದಾರಿ ಮಾಡುವೆ
ಹರಿವ ನದಿಗೆ ಅಡ್ಡ ನಿಂತು ನಿನಗೆ ದಾರಿ ಮಾಡುವೆ
ಬಿಸಿಲು ಮಳೆಯ ಚಳಿಯ ನುಂಗಿ ನೆರಳು ಬೆಳಕು ಆಗುವೆ
ಬಿಸಿಲು ಮಳೆಯ ಚಳಿಯ ನುಂಗಿ ನೆರಳು ಬೆಳಕು ಆಗುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
ಎದೆಯ ತುಂಬಾ ಒತ್ತಿಕೊಂಡು ಮುತ್ತು ಮಳೆಯ ಸುರಿಸುವೆ
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ

Random Song Lyrics :

Popular

Loading...